ಮಂಗಳೂರು : ಬಿಜೆಪಿ ಸರ್ಕಾರ ಲಸಿಕೆ ಮಾರಾಟ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು.

ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಎಂಎಲ್‌ಸಿ ಐವನ್ ಡಿಸೋಜಾ, ಶಶಿಧರ್ ಹೆಗ್ಡೆ, ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಹಾಜರಿದ್ದರು.

Related Posts

Leave a Reply

Your email address will not be published.