ಮಂಗಳೂರು: ರಾಜ್ಯೋತ್ಸವ ಸಂಭ್ರಮದಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆಯಿತು.
ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಅಧಿಕಾರಿಗಳು ಎಡವಟ್ಟು ಸರಿಪಡಿಸಿದರು.