ಮಂಜೇಶ್ವರದಲ್ಲಿ ಕೇಂದ್ರದ ಜನವಿರೋಧಿ ನೀತಿ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆದುರಾಗಿ ರಾಜ್ಯ ವ್ಯಾಪಕವಾಗಿ ಕೇಂದ್ರ ಸರಕಾರದ ಕಚೇರಿಗಳ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹಲವೆಡೆಗಳಲ್ಲೂ ಪ್ರತಿಭಟನಾ ಧರಣಿ ನಡೆಯಿತು.

ಸಿಪಿಐಎಂ ಕುಂಜತೂರು ಲೋಕಲ್ ಸಮಿತಿ ವತಿಯಿಂದ ಕುಂಜತ್ತೂರು ಅಂಚೆ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಸಿಪಿಐಎಂ ಮಂಜೇಶ್ವರ ಏರಿಯಾ ಸೆಕ್ರಟರಿ ಕೆ ವಿ ಕುಂಞಿರಾಮನ್ ಉದ್ಘಾಟಿಸಿ ಮಾತಾಡಿದರು. ಶ್ರೀಧರ ಅಧ್ಯಕ್ಷತೆ ವಹಿಸಿದ್ದರು. ಲೋಕಲ್ ಕಾರಿಯದರ್ಶಿ ಅಶ್ರಫ್ ಕುಂಜತ್ತೂರು, ಡಾ ಖಾದರ್, ಬಾಲಕೃಷ್ಣ ಮಾಸ್ತರ್, ಗಂಗಾಧರ, ಬದ್ರುದೀನ್ ,ರಜಕ್ ಜಿಶಾನ್, ಸನೂನ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.

ಅದೇ ರೀತಿ ಹೊಸಂಗಡಿ ಅಂಚೆ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಸಿಪಿಐಎಂ ಏರಿಯಾ ಸಮಿತಿ ಸದಸ್ಯೆ ಬೇಬಿ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು ಕರುಣಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ರಾಮದಾಸ್ ಕೊರಟ ಮೊಗೇರ್, ಗಂಗಾಧರ ದುರ್ಗಿಪಲ್ಲ, ಪ್ರೇಮ ಹೊಸಬೆಟ್ಟು ,ಪ್ರಶಾಂತ್ ಕನಿಲ, ಆಶೀರ್, ಅಶ್ರಫ್ ಗುಡ್ಡೆಕೇರಿ,ಇಬ್ರಾಹಿಂ, ಕಮಲಾಕ್ಷ ಕನಿಲ ಮೊದಲಾದವರು ಭಾಗವಹಿಸಿದ್ದರು.

ರೈತ ವಿರೋಧಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು, ಸಾರ್ವಜನಿಕ ವಲಯದ ಉದ್ಯಮಗಳನ್ನು ಉಳಿಸಿಕೊಳ್ಳಬೇಕು, ಸಂಸತ್ತನ್ನು ಮೌನಗೊಳಿಸುವ ಸರ್ವಾಧಿಕಾರಿ ಧೋರಣೆಯನ್ನು ನಿಲ್ಲಿಸಬೇಕು. ಫೆಡರಲಿಸಂ ವಿರುದ್ಧದ ದೌರ್ಜನ್ಯವನ್ನು ಕೊನೆಗೊಳಿಸಬೇಕು, ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳ ಮತ್ತು ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಕ್ರಮ ಕೈಗೊಳ್ಳಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳಲಾಗಿತ್ತು.

 

Related Posts

Leave a Reply

Your email address will not be published.