ಮರವೂರು ಸೇತುವೆ ದುರಸ್ತಿ ಕಾರ್ಯ ಬಹುತೇಕ ಪೂರ್ತಿ : ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆ
ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ.
ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ ಸೇತುವೆ ವಾಹನ ಸಂಚಾರಕ್ಕೆ ಯೋಗ್ಯ ವಾಗಿದೆಯೇ ಎಂದು ಪರೀಕ್ಷಿಸಲು ರೋಡ್ ಟೆಸ್ಟ್ ನಡೆಸಲಾಗುತ್ತದೆ. ಈ ಪರೀಕ್ಷೆ ಯಶಸ್ವಿಯಾದರೆ ಶುಕ್ರವಾರದಿಂದಲೇ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಘನ ವಾಹನ ಸಂಚಾರಕ್ಕೆ ಇನ್ನೂ ಸ್ಪಷ್ಟತೀರ್ಮಾನ ಮಾಡಲಾಗಿಲ್ಲ.