ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಎನ್‌ಐಎ ದಾಳಿ : ಐಸಿಸ್ ಸಂಪರ್ಕ ಶಂಕೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.

ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.

ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ.ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ.ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಡ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು. ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್‌ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.

Related Posts

Leave a Reply

Your email address will not be published.