ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ
ಮುಖ್ಯಮಂತ್ರಿಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಯಲ್ಲಿ ಸಿಎಂ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು. ತದ ನಂತರ ನಗರದ ವೆನ್ಲಾಕ್ ಜಿಲ್ಲಾಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ಸಿಎಂ ಬೊಮ್ಮಾಯಿ ಅವರು ಉದ್ಘಾಟಿಸಿದ್ರು,
ನಂತರ ಮಾತನಾಡಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ರು. ಗಡಿ ಜಿಲ್ಲೆಯಲ್ಲಿ ಜಾಗೃತೆ ವಹಿಸಬೇಕು, ಪಕ್ಕದ ರಾಜ್ಯದವರಿಗೆ ಟೆಸ್ಟ್ ಮಾಡಬೇಕು, ಈಗಾಗಲೇ ಎಲ್ಲಾ ಗಡಿ ಜಿಲ್ಲೆಗಳಿಗೆ ನಾನು ಭೇಟಿ ಕೊಡ್ತಾ ಇದ್ದೇನೆ, ಮೈಸೂರು ಮುಗಿಸಿ ದ.ಕ ಮತ್ತು ಉಡುಪಿ ಜಿಲ್ಲೆ ಪ್ರವಾಸ ಕೈಗೊಂಡಿದ್ದೇನೆ.
ಕೇರಳ ಮತ್ತು ಮಹಾರಾಷ್ಟ್ರದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ಕೊಡ್ತೇನೆ. ರಾಜ್ಯದ ಎಲ್ಲಾ ಕಡೆಗಳಲ್ಲೂ ವೆಂಟಿಲೇಟರ್, ಆಕ್ಸಿಜನ್ ಬೆಡ್ ಗಳನ್ನ ಹೆಚ್ಚಿಸಲಾಗ್ತಿದೆ. ಎಂಥಾ ಪರಿಸ್ಥಿತಿ ಬಂದರೂ ಸನ್ನದ್ದರಾಗಿರಲು ನಾವು ರೆಡಿಯಾಗಿದ್ದೇವೆ. ಮಕ್ಕಳಿಗೆ ಸೋಂಕು ತಗುಲುತ್ತಿರುವ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗಿದೆ. ಮಕ್ಕಳ ಇಮ್ಯುನಿಟಿ ಪವರ್ ಹೆಚ್ಚಿಸೋ ಸಲುವಾಗಿ ಪೌಷ್ಠಿಕ ಆಹಾರ ನೀಡಲು ಸೂಚಿಸಲಾಗಿದೆ. ಜಿಲ್ಲೆ ಮತ್ತು ತಾಲೂಕುಗಳಲ್ಲಿ ಮಕ್ಕಳ ಕೋವಿಡ್ ಟೆಸ್ಟ್ ಗೆ ಒಳಪಡಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ಮತ್ತು ಬೆಡ್ ಗಳು ತಯಾರಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೆÇಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.