HomeFresh Newsಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ಪ್ರಮಾಣ ವಚನ

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ಪ್ರಮಾಣ ವಚನ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಶಾಸಕಾಂಗದ ಪಕ್ಷದ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು.

ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments