ಮೂಡುಬಿದಿರೆ : ಎಸ್ ಕೆ ಎಸ್ ಎಸ್ ಎಫ್ ನಿಂದ ಪ್ರತಿಭಟನೆ
ಮೂಡುಬಿದಿರೆ: ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ಎಸ್ಕೆಎಸ್ಎಸ್ಎಫ್ ನಿಂದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು.
ವಾಗ್ಮಿ ಅಹ್ಮದ್ ನಹೀಮ್ ಪೈಝಿ ಮುಕ್ವೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಜಾತಿ, ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿ ದೇಶ ಒಡೆಯುವ ಕೋಮುವಾದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.ಆಹಾರದ ಕಾರಣಕ್ಕಾಗಿ ನಮ್ಮ ಮೇಲೆ ದೌರ್ಜನ್ಯವೆಸಗುವ ಹಕ್ಕು ಯಾರಿಗೂ ಇರುವುದಿಲ್ಲ. ಪ್ರಚೋದನಕಾರಿ ಭಾಷಣದ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ನಿಲ್ಲಬೇಕು. ಇಂತವರು ದೇಶಕ್ಕೆ ಅಪಾಯ ಎಂದರು.