ಮೂರು ಕೃಷಿ ಮಸೂದೆ ರೈತರ ಹೋರಾಟಕ್ಕೆ ಸಂದ ಜಯ : ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ
ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದರಿಂದ ಪ್ರಪಂಚದಲ್ಲಿ ಚಳುವಳಿಗಳಿಗೆ ಜಯ ಯಾವತ್ತೂ ಸಿಗುತ್ತದೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದರು.ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮಸೂದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಡೀ ಭಾರತದ ದೇಶದಲ್ಲಿ ಎಲ್ಲಾ ಜನರು ಒಗ್ಗಟ್ಟಾಗಿ ಹೋರಾಟಕ್ಕೆ ಇಳಿದಿದ್ದರು. 541 ಸಂಘಟನೆಗಳು ಸೇರಿ ಒಂದು ದೊಡ್ಡ ಹೋರಾಟವನ್ನು ಮಾಡಿದ್ದರು. ಈ ಹೋರಾಕ್ಕೆ ನಾನಾ ರಾಜ್ಯಗಳಿಂದಲೂ ಬೆಂಬಲ ವ್ಯಕ್ತವಾಗಿತ್ತು. ಸರ್ಕಾರ ತನ್ನ ನಿಲುವನ್ನು ಬಿಟ್ಟು ರೈತ ಹೋರಾಟಕ್ಕೆ ಮಣಿದು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದು ಜನಾಂದೋಲನಕ್ಕೆ ಸಿಕ್ಕಿದ ಮೊದಲ ಜಯ ಎಂದು ಹೇಳಿದರು.