ಮೋರ್ಗನ್ಸ್ ಗೇಟ್‌ನಲ್ಲಿ ನಡೆದ ಶೂಟೌಟ್ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಸುಧೀಂದ್ರ ಪ್ರಭು ಸಾವು
ನಗರದ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಶುಕ್ರವಾರ ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ. ಅ.5ರಂದು ತಂದೆಯಿಂದಲೇ ಗುಂಡೇಟಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಸುಧೀಂದ್ರನನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಆತನ ಮೆದುಳು ನಿಷ್ಕ್ರಿಯಗೊಂಡ ವಿಷಯವನ್ನು ವೈದ್ಯರು ಘೋಷಿಸಿದ್ದರು. ಶುಕ್ರವಾರ ನಸುಕಿನಜಾವ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಉದ್ಯಮಿ, ತಂದೆ ರಾಜೇಶ್ ಪ್ರಭು ನನ್ನು ಗುರುವಾರ ಬಂಧಿಸಲಾಗಿತ್ತು.