ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ : ಆರೋಪಿಗಳ ರಕ್ಷಣೆಗೆ ಯಾರೂ ಮಧ್ಯಪ್ರವೇಶ ಮಾಡಿಲ್ಲ : ಸಚಿವ ಕೋಟ

ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ‌ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ‌ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕಾನೂನು ಎಲ್ಲರಿಗೂ ಒಂದೇ. ಕಾನೂನಿನ ಚೌಕಟ್ಟಿನಲ್ಲೇ ತನಿಖೆ ನಡೆಯುತ್ತಿದೆ. ಈ ಕುರಿತು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾರೆ. ನಾವು ಮಧ್ಯಪ್ರವೇಶಿಸಿಲ್ಲ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.

Related Posts

Leave a Reply

Your email address will not be published.