ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ
ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಲಿದ್ದೇನೆ. ನಾಳೆ ಮಧ್ಯಾಹ್ನ 12 ಗಂಟೆಗೆ ಎಲ್ಲಾ ಅಧಿಕಾರಿಗಳ ಸಭೆ ಕರೆಯಲಿದ್ದೇನೆ. ಜೊತೆಗೆ ಜಿಲ್ಲಾ ಆಸ್ಪತ್ರೆಗೂ ಭೇಟಿ ನೀಡಲಿದ್ದೇನೆ ಎಂದರು.
ನೆರೆ ಪರಿಹಾರ ನೀಡುವ ಸಂದರ್ಭ ಕೆಲವೊಂದು ತಾಂತ್ರಿಕ ದೋಷಗಳಿಂದ ಪರಿಹಾರ ದೊರೆಯುವುದು ಸ್ವಲ್ಪ ತಡ ಆಗಬಹುದು. ಆ ರೀತಿಯ ಯಾವುದಾದರೂ ನಿರ್ದಿಷ್ಟ ಪ್ರಕರಣಗಳಿದ್ದಲ್ಲಿ ನನ್ನ ಗಮನಕ್ಕೆ ತಂದಲ್ಲಿ ತಕ್ಷಣ ನಾನು ಸರಿ ಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.