ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ ಫ್ಯಾಸಿಸ್ಟ್ ಆಡಳಿತದಿಂದ ಜನರು ಬೇಸತ್ತಿದ್ದು ಯುವಕರನ್ನು ನಿರುದ್ಯೋಗಳನ್ನಾಗಿ ಮಾಡಿ ಅವರನ್ನು ಹಿಂದುತ್ವದ ಹೆಸರಲ್ಲಿ ದಿಕ್ಕು ತಪ್ಪಿಸುತ್ತಿರುವ ಷಡ್ಯಂತರದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಿದ್ದೇವೆ. ಈ ಪ್ರಯುಕ್ತ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿಕೊಳ್ಳಲುವ ಯುವ ಜನತೆಗೆ ಈ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ ಇದ್ದು 18 ವರ್ಷದಿಂದ 35 ವಯೋಮಾನದ ಎಲ್ಲರಿಗೂ ಅವಕಾಶ ನೀಡಲಾಗಿದೆ. ಇನ್ನೂ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆ ಏರ್ಪಡಿಸಿ 5 ವಿಜೇತರನ್ನು ಜಿಲ್ಲಾ ವಕ್ತಾರಾಗಿ ಮಾಡಲಾಗುವುದು, ಬಳಿಕ ರಾಜ್ಯ ಮಟ್ಟದ ಸ್ಪರ್ಧೆ ಬೆಂಗಳೂರಿನಲ್ಲಿ ಆಯೋಜಿಸಿ ರಾಜ್ಯದ ಪ್ರತೀ ಜಿಲ್ಲೆಯ 5 ವಿಜೇತರಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು ರಾಜ್ಯ ಮಟ್ಟದ ಸ್ಪರ್ಧೆಯ 10 ವಿಜೇತರನ್ನು ರಾಜ್ಯ ವಕ್ತಾರರಾಗಿ ನೇಮಿಸಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.

ಇನ್ನೂ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಗೂಗಲ್ ಆನ್ ಲೈನ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ…ಸುದ್ದಿಗೋಷ್ಟಿಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ದೀಪಿಕಾ ರೆಡ್ಡಿ, ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಗಿರೀಶ್ ಆಳ್ವಾ, ಅಭಿಷೇಕ್ ಬೆಳ್ಳಿಪಾಡಿ, ಸೌಮ್ಯ ಲತಾ, ಮೆರಿಲ್ ರೇಗೊ ಮತ್ತಿತರರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.