ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚಿ:ಸಚಿವ ಎಸ್. ಅಂಗಾರ ಸೂಚನೆ

ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಸೂಚಿಸಿದರು.ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ 10.000 ರೂ. ಪರಿಹಾರ ಮೊತ್ತವನ್ನು ಶೀಘ್ರವಾಗಿ ಮತ್ತು ಕಡ್ಡಾಯವಾಗಿ ಆಯಾ ಕುಟುಂಬಗಳಿಗೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಅವರು ಮಾತನಾಡಿ, ಜಿಲ್ಲೆಯಲ್ಲಿ ನೆರೆಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ತೊಂದರೆಯಾಗಿಲ್ಲ, ಏಪ್ರಿಲ್ 1 ರಿಂದ ಆಗಸ್ಟ್ 8 ರವರೆಗೆ ಒಟ್ಟು 86 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, 490 ಮನೆಗಳು ಭಾಗಶಃ ಹನಿಯಾಗಿವೆ, ನೆರೆಯಿಂದಾಗಿ ಕೃಷಿ ವಲಯಗಳಿಗೆ ಹಾಗೂ ಪ್ರಾಣಿಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ, ವಿದ್ಯುತ್ ಅವಘಡಗಳು ಸಂಭವಿಸಿಲ್ಲ ಎಂದರು.

ಮಳೆಯಿಂದಾಗಿ ಹಾಳಾಗಿರುವ ರಸ್ತೆಯ ಕಾಮಗಾರಿಗಳನ್ನು ಕುರಿತಂತೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಕಡಲ ತೀರದಲ್ಲಿ ವಾಸಿಸುವ ಕುಟುಂಬಗಳಿಗೆ ಕಡಲ್ಕೊರೆತದ ಭೀತಿ ಇದ್ದಲ್ಲಿ ಅಂತಹ ಮನೆಗಳನ್ನು ಬೇರೆಡೆಗೆ ಸ್ಥಳಾಂತರಿಸಿ ರಾಜೀವ್‍ಗಾಂಧಿ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಡುವ ಕೆಲಸವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದರು.
ವೇದಿಕೆಯಲ್ಲಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿದರು.ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಯು.ಟಿ. ಖಾದರ್, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಮಾತನಾಡಿದರು.
ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

 

Related Posts

Leave a Reply

Your email address will not be published.