ರಾಜ್ಯದಲ್ಲಿ ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಣೆ
ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ವಿಸ್ತರಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಜೂನ್ 14ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.7ರವರೆಗ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಕೊರೋನ ಪ್ರಕರಣ ಇಳಿಮುಖವಾದರೂ ವೈರಾಣು ಹರಡುವ ಸರಪಳಿ ಮುಂದುವರಿಸಿದೆ. ಹೀಗಾಗಿ ಜೂ.14ರ ಬೆಳಗ್ಗೆ 6 ಗಂಟೆ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಇನ್ನು ಜೂನ್ 7ರಿಂದ ರಫ್ತು ಕೈಗಾರಿಕೆಗಳಿಗೆ 30ರಷ್ಟು ಅನುಮತಿ ನೀಡಲಾಗುವುದು ಎಂದು ಹೇಳಿದರು.
ಕೋವಿಡ್ ಪ್ಯಾಕೇಜ್ : ಪವರ್ ಲೂಮ್ ನೇಕಾರರಿಗೆ ಇಬ್ಬರು ಕೆಲಸಗಾರರಿಗೆ ಮೂರದಂತೆ ಮೂರು ಸಾವಿರ ಪರಿಹಾರ ನೀಡಲಾಗುತ್ತದೆ. ಚಲನ ಚಿತ್ರ, ದೂರು ದರ್ಶನ ಮಾಧ್ಯಮಿತ್ರರಿಗೆ 3 ಸಾವಿರ ನೀಡಲಾಗುತ್ತದೆ. ಮೀನುಗಾರರಿಗೆ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದಂತ ಮೀನುಗಾರರಿಗೆ ತಲಾ 3 ಸಾವಿರ ನೀಡಲಾಗುತ್ತದೆ ಎಂದರು. ಇನ್ ಲ್ಯಾಂಡ್ ದೋಣಿ ಮಾಲೀಕರಿಗೆ ಮೂರು ಸಾವಿರ ಕೂಡ ನೀಡಲಾಗುತ್ತದೆ ಎಂದರು. ಮುಜುರಾಯಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳಿಗೆ ಸಿ ವರ್ಗದ ದೇವಸ್ಥಾನದಲ್ಲಿ ಕೆಲಸ ಮಾಡುವಂತ ತಲಾ ಮೂರು ಸಾವಿರ ನೀಡಲು ನಿರ್ಧಾರ ಮಾಡಲಾಗಿದೆ.
ಆಶಾ ಕಾರ್ಯಕರ್ತರು ಕೂಡ ಕೊರೋನಾ ನಿಯಂತ್ರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಮೂರು ಸಾವಿರ ನೀಡಲಾಗುತ್ತದೆ. ಇದರಿಂದ 42574 ಕಾರ್ಯಕರ್ತೆಯರಿಗೆ ಸಹಾಯ ಆಗಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ನೀಡಲಾಗುತ್ತದೆ ಎಂದರು. ಎಲ್ಲಾ ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ. ನ್ಯಾಯವಾಧಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲು ನಿರ್ಧರಿಸಲಾಗಿದೆ ಎಂದರು. ಕೈಗಾರಿಕೆಗಳಿಗೆ ಜೂನ್ 2021 ನಿಗದಿತ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಂಎಸ್‌ಎಂಇ ಕೈಗಾರಿಕೆ ಹೊರತುಪಡಿಸಿ, ಇತರೆ ಕೈಗಾರಿಕೆಗಳ ಗ್ರಾಹಕರಿಗೆ ಮೇ, ಜೂನ್ ತಿಂಗಳ ವಿದ್ಯುತ್ ಶುಲ್ಕ ಪಾವತಿಯಿಂದ ಜುಲೈ 30ರವರೆಗೆ ವಿನಾಯ್ತಿ ನೀಡಲಾಗಿದೆ ಎಂದರು. ಈಗ ಸದ್ಯಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಒಂದು ವಾರದಲ್ಲೇ ಶೇ.5ರಷ್ಟು ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುವ ನಿರೀಕ್ಷೆ ಇದೆ. ಒಂದು ವೇಳೆ ಹಾಗೆ ಆದ್ರೇ ಲಾಕ್ ಡೌನ್ ನಿರ್ಬಂಧ ವಾಪಾಸ್ ಪಡೆಯಲಾಗುತ್ತದೆ ಎಂದರು.