ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ: ಹಾಸನದಲ್ಲಿ ಬಿಎಸ್‌ವೈ

ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಂತೆ ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನಹರಿಸುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಅಂದಿದ್ದಾರೆ. ಹಾಗಾಗಿ ಈ ಗೊಂದಲ ಮತ್ತೆ ಉದ್ಭವಿಸದು. ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100 ರಷ್ಟು ಬಲ ಬಂದಿದೆ, ಜವಾಬ್ದಾರಿ ಹೆಚ್ಚಾಗಿದೆ. ನನ್ನ ಮೇಲೆ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಇಟ್ಟುಕೊಂಡಿರುವ ಪ್ರೀತಿ ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ಇನ್ನು ಹಾಸನದಲ್ಲಿ ಕೊರೋನಾ ನಿಯಂತ್ರಣ ಕುರಿತು ಸಭೆಯಲ್ಲಿ ಹಲವು ಚರ್ಚೆಯಾಗಿದೆ. ಅಧಿಕಾರಿಗಳು ಪಾಸಿಟಿವ್ ದರವನ್ನು ಶೇ.5%ಕ್ಕೆ ಇಳಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಹಾಸನ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ನಾಳೆ ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಚರ್ಚೆ ನಡೆಸಿ ಅವರು ಹೇಳಿದವರಿಗೆ ಕಾಮಗಾರಿ ನೀಡಲಾಗುವುದು.ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಕೊರೋನಾ ಹಿನ್ನೆಲೆ ಎತ್ತಿನ ಹೊಳೆ ಕಾಮಗಾರಿಗೆ ತಡೆಯಾಗಿದೆ. ಆಲೂರು ಸಕಲೇಶಪುರ ಭಾಗದಲ್ಲಿ ಹೆಚ್ಚುತ್ತಿರೋ ಆನೆ ಹಾವಳಿಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಗೆ ಹೆಚ್ಚುವರಿ ಲಸಿಕೆ ಪೂರೈಕೆಗೆ ಕ್ರಮ ವಹಿಸಲಾಗುವುದು. ಹಣದ ಇತಿಮಿತಿಯೊಂದಿಗೆ ಜಿಲ್ಲೆಯ ಕೆಲಸ ಮಾಡಿಕೊಡುವ ಭರವಸೆಯನ್ನು ಸಿಎಂ ಯಡಿಯೂರಪ್ಪ ನೀಡಿದ್ದಾರೆ.

 

 

 

Related Posts

Leave a Reply

Your email address will not be published.