ರಾಜ್ಯದ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಬೊಮ್ಮಾಯಿ ಅವರಿಗೆ ಮನವಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ರಾಜ್ಯದ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹಾಗೂ ಕೇಂದ್ರ ಸ್ಥಾನಿಕ ಕಾರ್ಯದರ್ಶಿ ಪಿ.ಗೋಪಾಲ್ ರವರ ನಿಯೋಗದಿಂದ ಒತ್ತಾಯಪತ್ರ ಸಲ್ಲಿಸಿ ಮನವರಿಕೆ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪೂರಕವಾಗಿ ಸ್ಪಂದಿಸಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸು ಭರವಸೆ ನೀಡಿದರು.