Header Ads
Breaking News

ಆಲೂರಿನಾದ್ಯಂತ ಭಾರೀ ಮಳೆ: ರೈತರ ಜಮೀನಿಗೆ ನುಗ್ಗಿದ ನೀರು

ಆಲೂರು: ಆಲೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ತಾಲೂಕು ಪಾಳ್ಯ ಹೋಬಳಿ ಮಡಬಲು ಗ್ರಾಮದ ಚಂದ್ರಶೇಖರ್ ಎಂಬುವವರ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಢೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ.

ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿಗಳು ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ ನಾಶವಾಗಿದ್ದು ಬೇರೆ ದಾರಿ ಕಾಣದೆ ರೈತ ತಲೆಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಮಳೆಯ ರುದ್ರನರ್ತನದಿಂದ ಆಗಿರುವ ನಷ್ಟದ ಸಮೀಕ್ಷೆಯನ್ನು ಮಾಡಿ ಬೆಳೆ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರವನ್ನು ನೀಡಬೇಕಾಗಿ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *