Header Ads
Breaking News

ರಾಜ್ಯದಲ್ಲಿ ಮೇ 10ರಿಂದ ಮೇ 24ರ ವರೆಗೆ ಲಾಕ್‌ಡೌನ್ ಘೋಷಣೆ

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ 10ರಿಂದ ಮೇ24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗುತ್ತಿದೆ. ಈ ಅವಧಿಯಲ್ಲಿ ಅಂಗಡಿ, ಬಾರ್, ಹೋಟೆಲ್, ಪಬ್ ನಿರ್ಬಂಧಿಸಲಾಗಿದೆ ಎಂದರು.

ಆಹಾರ, ಹಾಲು, ತರಕಾರಿ ಮಾರಾಟಕ್ಕೆ ಅನುಕೂಲುವಾಗುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅನುಮತಿ ನೀಡಲಾಗಿದೆ. ಹಾಲಿನ ಅಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ. ತಳ್ಳೋ ಗಾಡಿಯಲ್ಲಿ ಕೂಡ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆಸ್ಪತ್ರೆಗೆ ಹೋಗದೋದಕ್ಕೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತು ಕೊಂಡೊಯ್ಯೋದಕ್ಕೆ ಅವಕಾಶ ನೀಡಲಾಗಿದೆ ಎಂದರು.

ನಿಗಧಿತ ಕಟ್ಟಡದೊಳಗೆ ಜನರನ್ನು ಬಳಸಿಕೊಂಡು ಕೆಲಸ ಮಾಡೋದಕ್ಕೆ ಅವಕಾಶವಿದೆ. ವಿವಾಹದಲ್ಲಿ 50 ಜನರಿಗೆ ಮಾತ್ರ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿದೆ. ಹೆಚ್ಚು ಜನರು ಭಾಗವಹಿಸಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Related posts

Leave a Reply

Your email address will not be published. Required fields are marked *