Header Ads
Breaking News

ಹಿರಿಯ ಯಕ್ಷಗಾನ ಕಲಾವಿದ ಮಹಾಬಲೇಶ್ವರ ಹೆಗಡೆ ನಿಧನ

ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ, ಹಿರಿಯ ವಿದ್ವಾಂಸ ಪ್ರೊಫೆಸರ್ ಎಂ.ಎ.ಹೆಗಡೆ(73)  ಬೆಂಗಳೂರಿನಲ್ಲಿ ನಿಧನರಾದರು. ಇಂದು ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಮೃತರು ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಅಕಾಡಮಿಯ ಅಧ್ಯಕ್ಷರಾಗಿ ಎಂ.ಎ.ಹೆಗಡೆ ಅವರು ಕಲೆ, ಕಲಾವಿದರ ಉನ್ನತಿಗಾಗಿ ಸಾಕಷ್ಟು ಶ್ರಮಿಸಿದ್ದರು. ಅವರು ರೂಪಿಸಿದ್ದ ಮಾತಿನ ಮಂಟಪ ಕಾರ್ಯಕ್ರಮ ಅತ್ಯಂತ ಜನಪ್ರಿಯವಾಗಿತ್ತು.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರಾದ ಪ್ರೊ.ಎಂ.ಎ.ಹೆಗಡೆ ಪ್ರಸಕ್ತ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನೆಲೆಸಿದ್ದರು. ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಪಿಸಿ ಜಬಿನ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದ ಎಂ.ಎ.ಹೆಗಡೆ, ಸಂಸ್ಕೃತದಲ್ಲೂ ಅಪಾರ ಪಾಂಡಿತ್ಯ ಹೊಂದಿದ್ದರು. ಸಂಸ್ಕೃತ ಉಪನ್ಯಾಸಕರಾಗಿಯೂ ಸಹ ಸೇವೆ ಸಲ್ಲಿಸಿದ್ದ ಅವರು ಯಕ್ಷಗಾನದ ಬಗ್ಗೆ ವಿಶೇಷ ಒಲವು ಹೊಂದಿದ್ದರು. ಸ್ವತಹ ಪಾತ್ರಧಾರಿಯು ಆಗಿದ್ದ ಎಂ.ಎ.ಹೆಗಡೆ, 15ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಸೀತ ವಿಯೋಗ, ತ್ರಿಶಂಕು ಚರಿತೆ, ರಾಜಾ ಕಂದಾಮ ಮುಂತಾದವು ಅವರ ಜನಪ್ರಿಯ ಪ್ರಸಂಗಗಳಾಗಿವೆ. ಅಲಂಕಾರ ತತ್ವ, ಭಾರತೀಯ ತತ್ವಶಾಸ್ತ್ರ ಪರಿಚಯ, ಬ್ರಹ್ಮಸೂತ್ರ ಚತು; ಸೂತ್ರಿ, ಮತ್ತು ಸಿದ್ಧಾಂತ ಬಿಂದು ಮುಂತಾದ ಗ್ರಂಥಗಳನ್ನು ಅವರು ರಚಿಸಿದ್ದಾರೆ.

Related posts

Leave a Reply

Your email address will not be published. Required fields are marked *