ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಸುರತ್ಕಲ್‍ನ ಬಿಂದಿಯಾ ಎಲ್ ಶೆಟ್ಟಿ
ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ ಎಸ್ ಎಲ್ ಸಿಯಲ್ಲಿ ಹಾಗೂ ಪಿಯುಸಿಯಲ್ಲಿ ರಾಜ್ಯದಲ್ಲೇ ಐದನೇ ಸ್ಥಾನ ಪಡೆದಿದ್ದರು. ಸದ್ಯ ಸಿಎ ವ್ಯಾಸಂಗವನ್ನೂ ಮಾಡುತ್ತಿರುವ ಬಿಂದಿಯಾ ಶೆಟ್ಟಿ ಅನೇಕ ಸಂಘಸಂಸ್ಥೆಗಳಿಂದಲೂ ಪ್ರಶಸ್ತಿ ಗೌರವಗಳನ್ನು ಪಡೆದಿದ್ದಾರೆ.