ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಚಾಲನೆ
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ , 2021- 22 ನೇ ಸಾಲಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷ ಡಾ: ಕೆ.ಕಸ್ತೂರಿರಂಗನ್ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.
ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಂಸದ ಪಿ.ಸಿ.ಮೋಹನ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.