ರಾಷ್ಟ್ರೀಯ ಹೆದ್ದಾರಿ ಚತುಷ್ಪಥ : ರೈತರಿಗೆ ಅನ್ಯಾಯ

ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ ಕಾನೂನುಬಾಹಿರ ನಡೆಯಿಂದ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪರಿಹಾರವನ್ನು ನೀಡದೆ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ನ್ಯಾಯ ಸಿಗುವವರೆಗೂ ರೈತರ ಪರ ಹೋರಾಟ ನಡೆಸುವುದಾಗಿ ಭೂ ಸಂತ್ರಸ್ತರ ಹೋರಾಟ ಸಮಿತಿಯ ಅಧ್ಯಕ್ಷೆ ಮರಿಯಮ್ಮ ಥಾಮಸ್ ಹೇಳಿದರು.

ಅವರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಕುರಿತು ಮಾಹಿತಿ ನೀಡಿದರು.ರಾಜಕಾರಣಿಗಳಿಗೆ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ವರ್ಷಾಂತ್ಯದೊಳಗೆ ಕಾಮಗಾರಿ ಪ್ರಾರಂಭವಾಗುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಈ ಹೆದ್ದಾರಿ ಹಾದುಹೋಗುವ ಸಾಣೂರು, ಬೆಳುವಾಯಿ, ಮಾರ್ಪಾಡಿ, ಪಡುಮಾರ್ನಾಡು, ಪುತ್ತಿಗೆ, ಬಡಗಮಿಜಾರು, ತೆಂಕಮಿಜಾರು, ಬಡಗಎಡಪದವು, ತೆಂಕಎಡಪದವು, ಅಡ್ಡೂರು, ತಿರುವೈಲು, ಕುಡುಪು ವ್ಯಾಪ್ತಿಯ 200 ಮಂದಿ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು 80 ಎಕ್ರೆಯಷ್ಟು ಜಾಗಕ್ಕೆ ಹೈಕೋರ್ಟ್‍ನಿಂದ ತಡೆಯಾಜ್ಞೆ ಸಿಕ್ಕಿದೆ. ಇನ್ನೂ ಹಲವು ಮಂದಿ ರಿಟ್ ಅರ್ಜಿ ಸಲ್ಲಿಸಲಿದ್ದು ಸುಮಾರು 120 ಎಕ್ರೆಗೆ ತಡೆಯಾಜ್ಞೆ ಸಿಗುವ ವಿಶ್ವಾಸವಿದೆ. ಹೈಕೋರ್ಟ್‍ನಲ್ಲಿ ನ್ಯಾಯ ಸಿಗದಿದ್ದರೆ ಸುಪ್ರೀಂಕೋರ್ಟ್ ಮೆಟ್ಟಿಲೇರಲೂ ಸಿದ್ಧ ಎಂದರು.

ಸುದ್ದಿಗೋಷ್ಠಿಯಲ್ಲಿ ಭೂ ಸಂತ್ರಸ್ತರ ಸಮಿತಿಯ ಸಂಚಾಲಕ ಪ್ರಕಾಶ್ಚಂದ್ರ ಕೆ., ಪ್ರಮುಖರಾದ ಜಯರಾಮ್ ಪೂಜಾರಿ ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.