ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಹಿನ್ನೆಲೆ: ತಕ್ಷಣ ಸ್ಪಂದಿಸಿದ ಶಾಸಕರು ಮತ್ತು ಮೇಯರ್
ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಮಂಗಳೂರು ಪಾಲಿಕೆಯ ಮೇಯರ್ ಪ್ರೇಮಾನಂದ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಶಾಸಕರು ಅಧಿಕಾರಿಗಳೊಂದಿಗೆ ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಮೋಟಾರ್ ಕೆಟ್ಟು ಹೋಗಿರುವುದರಿಂದ ನೀರಿನ ಸಮಸ್ಯೆ ಉಂಟಾಗಿದೆ. ತಕ್ಷಣ ಅದಕ್ಕೆ ಅಧಿಕಾರಿ ಹಾಗೂ ಸ್ಥಳೀಯ ಕಾರ್ಪೋರೇಟ್ ಸ್ಪಂದಿಸಿ ಕೆಲಸ ಕಾರ್ಯವನ್ನು ಮಾಡಿದ್ದಾರೆ. ಇದೀಗ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.ಆನಂತರ ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳ ಶಾಸಕರ ಜೊತೆಯಲ್ಲಿ ಸಭೆ ನಡೆಸಲಾಗುತ್ತದೆ. ಈ ವಿಚಾರದಲ್ಲಿ ಕಾಂಗ್ರೆಸ್ನವರು ರಾಜಕೀಯ ಮಾಡುವುದು ಸರಿಯಲ್ಲ. ಈ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡಿದ್ದೇವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮನಪಾ ಕಾರ್ಪೋರೇಟ್ಗಳಾದ ಪೂರ್ಣಿಮಾ, ಸಂದೀಪ್ ಗರೋಡಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.