ವಾಪಸ್ ಬಂದರೆ ಕ್ಷಮೆ ಇದೆ: ಬರಲಿಲ್ಲ ಅಂದ್ರೆ ನೋಟಿಸ್ ಕೊಡ್ತೀವಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ
ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.
ಅವರು ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪಕ್ಷಾಂತರ ಮಾಡಿ ಬಿಜೆಪಿಗೆ ಬೆಂಬಲ ಕೊಟ್ಟಿರುವ ಏಳು ಮಂದಿ ನಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಮಗೆ ಒಂದು ಪತ್ರವನ್ನು ನೀಡಿದ್ದಾರೆ ಆದರೆ ನನಗೆ ಪಕ್ಷದ ಯಾವ ಒಬ್ಬ ಸದಸ್ಯರು ಕೂಡ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ರಾಜೀನಾಮೆ ಪತ್ರವನ್ನು ನಮಗೆ ನೀಡಿಲ್ಲ ಹೀಗಾಗಿ ಪಕ್ಷವಿರೋಧಿ ಚಟುವಟಿಕೆ ಎಂದು ಭಾವಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ನಾವು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಪಕ್ಷ ದ್ರೋಹ ಕೆಲಸ ಮಾಡಿರುವ ಏಳು ಮಂದಿಯ ವಿರುದ್ಧ ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬುದರ ಚರ್ಚೆ ಮಾಡಿ ನಂತರ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದರು.