ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಲು ಆಗ್ರಹ : ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.abvp protest ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಯ ವ್ಯಾಪ್ತಿಯ ಬರುವ ಎಲ್ಲಾ ಹಾಸ್ಟೆಲ್ ಗಳನ್ನು ತೆರೆಯಬೇಕೆಂದು ಆಗ್ರಹಿಸಿದರು. ಈ ವೇಳೆ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ , ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ದೀಪ್ತಿ , ತಾಲೂಕು ಸಂಚಾಲಕ್ ನಿಶಾನ್ ಆಳ್ವ , ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ . ಪ್ರಮುಖರಾದ ಶ್ರೀಲಕ್ಷ್ಮಿ , ಆತ್ಮಿಕ , ಆದರ್ಶ್ , ಸುಶಾಂತ್ , ವೈಷ್ಣವಿ , ರಂಜಿತ್ , ಆದಿತ್ಯ , ಶ್ರೀಪಾದ್ ಉಪಸ್ಥಿತರಿದ್ದರು .

 

Related Posts

Leave a Reply

Your email address will not be published.