ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಮಂಗಳೂರಿನಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ

ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು.

ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡು ದಿನಗಳ ಹಿಂದೆ ನಡೆದ ಅತ್ಯಾಚಾರ ಪ್ರಕರಣ ರಾಜ್ಯವೇ ನಾಚಿಕೆ ಪಡುವಂತಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ಕೊಡುವ ಬದಲು ಆರೋಪಿಗಳನ್ನ ತಕ್ಷಣ ಪತ್ತೆ ಹಚ್ಚಿ ಸಂತ್ರಸ್ತೆಗೆ ಸೂಕ್ತ ನ್ಯಾಯ, ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದರು.

ತದ ಬಳಿಕ ಎನ್.ಎಸ್.ಯು.ಐ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಸುಹಾನ್ ಆಳ್ವ ಮಾತನಾಡಿ, ಶೀಘ್ರದಲ್ಲೇ ಆರೋಪಿಗಳನ್ನ ಬಂಧನ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಎನ್‌ಎಸ್‌ಯುಐ ನೇತೃತ್ವದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲಾಗುವುದು. ಆರೋಪಿಗಳನ್ನ ಬಂಧಿಸಿಬೇಕು, ಅವರನ್ನ ಗಲ್ಲಿಗೇರಿಸಬೇಕು .ಕಾಟಾಚರಕ್ಕೆ ಬಂಧನ ಮಾಡುವುದಲ್ಲ, ಅವರನ್ನ ಕಠಿಣ ಶಿಕ್ಷೆಗೆ ಒಳಪಡಿಸಿಕೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ರಾಜ್ಯ ಸಂಯೋಜಕ ಝೈನ್ ಆತೂರು, ಎನ್.ಎಸ್.ಯು.ಐ ದಕ್ಷಿಣ ಕನ್ನಡ ಕಾರ್ಯಾಧ್ಯಕ್ಷ ಪವನ್ ಸಾಲ್ಯಾನ್, ಉಪಾಧ್ಯಕ್ಷ ನಿಖಿಲ್ ಪೂಜಾರಿ, ಎನ್.ಎಸ್.ಯು.ಐ ಮಂಗಳೂರು ವಿಶ್ವವಿದ್ಯಾನಿಲಯ ಅಧ್ಯಕ್ಷ ಸಿರಾಜ್ ಗುದ್ರು, ಎನ್.ಎಸ್.ಯು.ಐ ಪದಾಧಿಕಾರಿಗಳಾದ ಬಾತೀಷ್ ಅಳಕೆಮಜಲು, ಶೋನಿತ್ ಬಂಗೇರ, ನಿಖಿಲ್ ಶೆಟ್ಟಿ, ಲೆಸ್ಟರ್ ಪಿಂಟೋ, ಅಯಾಝ್ ಚಾರ್ಮಾಡಿ ಯಶವಂತ್, ಅಬ್ದುಲ್ ರಾಝೀ,ನಜೀಬ್ ಮಂಚಿ, ಅಯಾನ್,ಶಕೀಲ್,ಯುವ ನಾಯಕರಾದ ನೌಫಲ್ ಅಬ್ದುಲ್ಲಾ ಹಾಗೂ ಝುಬೈರ್ ಪಿಲಿಗೂಡು ಹಾಗೂ ಎನ್.ಎಸ್.ಯು.ಐ ಕಾರ್ಯಕರ್ತರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.