ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ
ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ.
ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ.
ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಇಲ್ಲಿನ ಸೋಲು – ಗೆಲವು ಆ ಚುನಾವಣೆಯ ಫಲಿತಾಂಶಕ್ಕೆ ದಿಕ್ಸೂಚಿಯಾಗಬಹುದು ಎನ್ನಲಾಗಿದೆ. ಹೀಗಾಗಿ ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಇದು ಪ್ರತಿಷ್ಟೆಯಾಗಿದೆ.