ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ: ಎಸ್ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್
ವಿಧಾನ ಪರಿಷತ್ ಚುನಾವಣೆಗೆ ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ನ.17ರೊಳಗೆ ತೀರ್ಮಾನ ತೆಗೆದುಕೊಂಡು, ಒಂದೊಮ್ಮೆ ಸ್ಪರ್ಧಿಸುವುದಾದರೂ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದೇನೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಮಂಗಳವಾರ ಡಯಾನಾ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗ ಒಬ್ಬ ಅಭ್ಯರ್ಥಿಯನ್ನು ಸ್ಪರ್ಧಿಸುವಂತೆ ಜನರು ಒತ್ತಾಯ ಮಾಡುವುದು ಸಹಜ. ಆದರೆ, ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬ ನಿರ್ಧಾರ ಅಭ್ಯರ್ಥಿಗೆ ಬಿಟ್ಟದ್ದು. ವಿಧಾನ ಪರಿಷತ್ ಚುನಾವಣೆ ಪಕ್ಷಗಳ ನಡುವೆ ನಡೆಯುವ ಚುನಾವಣೆಯಾಗಿದೆ. ನಾನು ಯಾವುದೇ ಪಕ್ಷದಲ್ಲಿಲ್ಲ. ಎಲ್ಲ ಪಕ್ಷಗಳ ಮಧ್ಯೆ ಇದ್ದೇನೆ. ಹೀಗಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಆಲೋಚನೆ ಮಾಡಬೇಕಿದೆ ಎಂದರು.