ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ರಿಲೀಸ್: ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 ರವರೆಗೂ ಮಾರ್ಗಸೂಚಿ ಜಾರಿಯಲ್ಲಿರಲಿವೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಮಹಾರಾಷ್ಟ್ರ, ಕೇರಳ ಗಡಿಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಕೇರಳ ಗಡಿ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಿದ್ದು, ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ.
ವೀಕೆಂಡ್ ನಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಇರುತ್ತದೆ. ಆದರೆ, ರೈಲು ಮತ್ತು ವಿಮಾನ ಟಿಕೆಟ್ ತೋರಿಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ಮದುವೆಯಲ್ಲಿ 100 ಜನರು ಭಾಗಿಯಾಗಲು ಅವಕಾಶ ನೀಡಲಾಗಿದೆ. ಅದೇ ರೀತಿ ಅಂತ್ಯಕ್ರಿಯೆಯಲ್ಲಿ ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದ್ದು