ಶೈಕ್ಷಣಿಕ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರದಿಂದ ಗೊಂದಲ: ಶಾಸಕ ಯು.ಟಿ.ಖಾದರ್
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲ ನಿರ್ಮಾಣ ಮಾಡಿದೆ. ಈ ವಿಚಾರದಲ್ಲಿ ಶಿಕ್ಷಕರನ್ನು ರಾಜ್ಯ ಸರ್ಕಾರ ಭಿಕ್ಷುಕರನ್ನಾಗಿ ಮಾಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ.
ಈ ಕುರಿತು ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನ ಲಾಕ್‌ಡೌನ್ ಪ್ಯಾಕೇಜ್‌ನಲ್ಲಿ ಕೂಡ ಶಿಕ್ಷಕರನ್ನ ಕಡೆಗಣಿಸಲಾಗಿದೆ. ಅನುದಾನ ರಹಿತ ಶಿಕ್ಷಕರಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು. ಶಿಕ್ಷಣ ಸಚಿವರು ಪ್ರತಿನಿತ್ಯ ಒಂದೊಂದು ಹೇಳಿಕೊಟ್ಟು ಪೋಷಕರಿಗೆ ಮತ್ತು ಮಕ್ಕಳಿಗೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಸಂತೋಷ್‌ಶೆಟ್ಟಿ, ನಾಗೇಶ್, ಮಹಮ್ಮದ್ ಮುಸ್ತಾಫ್, ಮಹಾಬಲ ಹೆಗಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.