ಶ್ರೀನಿವಾಸ್ ವಿವಿಯ ಕಾಲೇಜ್ ಆಫ್ ಏವಿಯೇಶನ್ ಸ್ಟಡೀಸ್: ವಿದ್ಯಾರ್ಥಿಗಳಿಗಾಗಿ ವೀಡಿಯೋ ಮೇಕಿಂಗ್ ಸ್ಪರ್ಧೆ
ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಏವಿಯೇಷನ್ ಸ್ಟಡೀಸ್‌ನ ಬಿಬಿಎ ಏವಿಯೇಶನ್ ಮ್ಯಾನೇಜ್‌ಮೆಂಟ್, ಏವಿಯೇಶನ್ ಲಾಜಿಸ್ಟಿಕ್ ಮ್ಯಾನೇಜ್‌ಮೆಂಟ್ ಮತ್ತು ಏವಿಯೇಶನ್ ಟ್ರಾವೆಲ್ ಮತ್ತು ಟೂರಿಸಂ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ವೀಡಿಯೋ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಕಾಲೇಜಿನ ಎನ್‌ಎಸ್‌ಎಸ್ ಹಾಗೂ ಸಮಾಜಸೇವಾ ವಿಭಾಗದ ವತಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಹಾಗೂ ಅದರ ಸಮಸ್ಯೆಗಳು ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅತ್ಯುನ್ನತ ಎರಡು ವೀಡಿಯೋಗಳನ್ನು ಆಯ್ಕೆ ಮಾಡಲಾಯಿತು. ಈ ಸ್ಪರ್ಧೆಯಲ್ಲಿ ಅಂತಿಮ ವರ್ಷದ ಬಿಬಿಎ ಏವಿಯೇಶನ್ ಮ್ಯಾನೇಜ್‌ಮೆಂಟ್‌ನ ಅಲ್ವಿನಾ ನಿಯೋಲಾ ಮೆನೆಜಸ್ ಪ್ರಥಮ ಸ್ಥಾನ ಮತ್ತು ದ್ವಿತೀಯ ವರ್ಷದ ಬಿಬಿಎ ಏವಿಯೇಶನ್ ಮ್ಯಾನೇಜ್‌ಮೆಂಟ್‌ನ ಮಹಮ್ಮದ್ ಫ್ಯಾರೀಸ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.
ಕಾಲೇಜಿನ ಡೀನ್ ಪ್ರೊ ಪವಿತ್ರ ಕುಮಾರಿ ಅವರ ಮಾರ್ಗದರ್ಶನದಲ್ಲಿ ಎನ್‌ಎಸ್‌ಎಸ್ ಹಾಗೂ ಉನ್ನತ್ ಭಾರತದ ಸಂಯೋಜಕ ಪ್ರೊ. ಜಯಪ್ರಕಾಶ್, ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.