ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ
ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು.
ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಶಿಲಾನ್ಯಾಸ ನೆರೆವೇರಿಸಿದರು. ಈ ಸಂದರ್ಭ ದೇವಸ್ಥಾನದ ಅರ್ಚಕರಾದ ವೆಂಕಟದಾಸ್ ಭಟ್, ಹರೀಶ್ಚಂದ್ರ ಭಟ್, ವಾಸ್ತು ತಜ್ಞ ಗಣಪತಿ ಶೆಣೈ, ಆಡಳಿತ ಸಮಿತಿಯ ಸದಸ್ಯರು, ಊರ ಪ್ರಮುಖರು ಉಪಸ್ಥಿತರಿದ್ದರು
ಅಂದಾಜು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನ ನಿರ್ಮಾಣಗೊಳ್ಳಲಿದ್ದು ಮುಂದಿನ ಜನವರಿ ತಿಂಗಳ 23 ರಂದು ಪ್ರತಿಷ್ಠಾ ಕಾರ್ಯ ನಡೆಸಲು ಸಂಕಲ್ಪಿಸಲಾಗಿದೆ. ಜನವರಿ 24 ರಿಂದ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ನಡೆಯಲಿದ್ದು, ದೇವಸ್ಥಾನ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭಗೊಳ್ಳಲಿದೆ ಎಂದು ಆಡಳಿತ ಮಂಡಳಿ ಪ್ರಮುಖರು ತಿಳಿಸಿದ್ದಾರೆ.