ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು ಸಾವು- ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಚಲನ ವಲನಗಳ ಬಗ್ಗೆ ಮಾಹಿತಿ ನೀಡದ ಅರಣ್ಯ ಇಲಾಖೆ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.

 

 

Related Posts

Leave a Reply

Your email address will not be published.