ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇ ಸ್ಟ್ಯಾಂಪಿಂಗ್ ಬಿಡುಗಡೆ
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ ನಡೆಯಿತು.
ನ್ಯಾಯವಾದಿ ಸುರೇಶ್ ಶೆಟ್ಟಿ ಇ ಸ್ಟ್ಯಾಂಪಿಂಗ್ ಬಿಡುಗಡೆಗೊಳಿಸಿದರು.
ಅವರು ಮಾತನಾಡಿ ಇಲ್ಲಿ ಇಸ್ಟ್ಯಾಂಪಿಂಗ್ ಆರಂಭಿಸಿರುವುದರಿಂದ ಗ್ರಾಮೀಣ ಜನರಿಗೆ ತುಂಬಾ ಅನುಕೂಲವಾಗಲಿದೆ. ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕೆಲಸಗಳಿಗೂ ಈ ಸ್ಟ್ಯಾಂಪ್ ಅಗತ್ಯವಾಗಿರುವುದರಿಂದ ಜನರು ನಗರಕ್ಕೆ ಹೋಗಬೇಕಾಗುತ್ತದೆ. ಠಸೆ ಪೇಪರ್ ಗಿಂತ ಹೆಚ್ಚಿನ ಮೊತ್ತವನ್ನು ನಗರಕ್ಕೆ ಹೋಗಲು ಪ್ರಯಾಣ ವೆಚ್ಚಕ್ಕೆ ಖರ್ಚು ಮಾಡಬೇಕಾಗುತ್ತದೆ. ಅದರ ಬದಲು ಸ್ಟ್ಯಾಂಪ್ ಪೇಪರ್ ಗಳು ಇಲ್ಲಿಯೇ ಲಭ್ಯವಾದರೆ ಜನರಿಗೆ ಅನುಕೂಲದ ಜೊತೆಗೆ ಹಣ ಹಾಗೂ ಸಮಯದ ಉಳಿತಾಯವಾಗಲಿದೆ ಎಂದರು.
ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಪೂಜಾರಿ ಅಳಕ್ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸಜೀಪಮುನ್ನೂರು ಮೂರ್ತೆದಾರರ ಸಹಕಾರ ಸಂಘದಲ್ಲಿ ಈ ಸ್ಟ್ಯಾಂಪ್ ಆರಂಭಗೊಂಡಿರುವುದರಿಂದ ಗ್ರಾಮದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮಾತನಾಡಿ ಸಿದ್ದಕಟ್ಟೆ ಶಾಖೆಯಲ್ಲಿ ಈ ಸ್ಟ್ಯಾಂಪಿಂಗ್ ಆರಂಭ ಮಾಡಬೇಕು ಎನ್ನುವ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಈ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಇದರಿಂದ ಜನರಿಗೂ ಅನುಕೂಲವಾಗಲಿದೆ, ಸಂಘದ ವ್ಯವಹಾರವೂ ಹೆಚ್ಚಾಗಲಿದೆ ಎಂದರು. ಸಿದ್ದಕಟ್ಟೆ ವಲಯ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ, ತಾ.ಪಂ. ಮಾಜಿ ಸದಸ್ಯ ರಮೇಶ್ ಕುಡ್ಮೇರ್, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನಪಾಲು, ನಿರ್ದೆಶಕರಾದ ರಮೇಶ್ ಅನ್ನಪ್ಪಾಡಿ, ಜಯಶಂಕರ್ ಕಾನ್ಸಲೆ, ಅಶೋಕ್ ಕುಮಾರ್ ಕೋಮಾಲಿ, ಕೆ. ಸುಜಾತ ಎಂ., ವಾಣಿ ವಸಂತ, ವಿಠಲ ಬೆಳ್ಚಾಡ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ., ಲೆಕ್ಕಿಗ ಪವಿತ್ರ, ಶಾಖಾ ವ್ಯವಸ್ಥಾಪಕಿ ಅಕ್ಷಿತಾ ಹಾಗೂ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ನಿರ್ದೇಶಕ ಗಿರೀಶ್ ಕುಮಾರ್ ಪೆರ್ವ ಸ್ವಾಗತಿಸಿ, ವಂದಿಸಿದರು.