ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಇಂಟಕ್ ಆಗ್ರಹ
ಕರಾವಳಿಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ತನ್ನಿ ಎಂದು ಇಂಟಕ್ ನ ರಾಜ್ಯ ಕಾರ್ಯಾಧ್ಯಕ್ಷರಾದ ರಾಕೇಶ್ ಮಲ್ಲಿ ಆಗ್ರಹಿಸಿದ್ದಾರೆ.
ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕರಾವಳಿಯಲ್ಲಿ ಕೈಗಾರಿಕಾ ಪ್ರಾಂಗಣ ನಿರ್ಮಿಸಲು ಭೂಸ್ವಾಧೀನ, ಕೈಗಾರಿಕೆ ನಿರ್ಮಾಣದ ಬಗ್ಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಇದುವರೆಗೆ ಎಚ್ಪಿಸಿಎಲ್, ಎಂಸಿಎಫ್, ಕುದುರೆಮುಖ ಸಹಿತ ಸ್ಥಳೀಯ ಆರ್ಥಿಕ ವಲಯಕ್ಕಾಗಿ ಭೂಮಿ ಕಳೆದುಕೊಂಡಿವರು ನೆಮ್ಮದಿ ಕಳೆದುಕೊಂಡಿದ್ದಾರೆ ಹೊರತು ಉದ್ಯೋಗ ಸಿಕ್ಕಿಲ್ಲ. ಅವಿಭಜಿತ ಜಿಲ್ಲೆಯಲ್ಲಿ ಕೈಗಾರಿಕೆ ನಿರ್ಮಿಸುವುದಾದರೆ ಮೊದಲು ಈವರೆಗೆ ಸ್ಥಳೀಯರಿಗೆ ಎಷ್ಟು ಉದ್ಯೋಗ ನೀಡಿದ್ದೀರಿ ಲೆಕ್ಕ ಕೊಡಿ ಎಂದು ಆಗ್ರಹಿಸಿದ್ದಾರೆ.
ಕೈಗಾರಿಕಾ ವಲಯದಲ್ಲಿ ಅನ್ಯ ರಾಜ್ಯದವರೇ ಉದ್ಯೋಗ ಪಡೆಯುವ ಸಾಧ್ಯತೆಯೇ ಹೆಚ್ಚು. ಇಲ್ಲಿನವರಿಗೆ ನಿರುದ್ಯೋಗವೇ ಗತಿಯಾಗುತ್ತದೆ. ಹೀಗಾಗಿ ತಕ್ಷಣ ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕೆಂದು ಆಗ್ರಹಿಸಿದ್ದರು.ಇನ್ನು ಸ್ಥಳೀಯರಿಗೆ ಉದ್ಯೋಗ ಕೊಡಲೇಬೇಕು ಎಂಬ ಕಾನೂನು ರೂಪಿಸಿ ಬಳಿಕ ಭೂಮಿ ಪಡೆದು ಕೈಗಾರಿಕೆ ಸ್ಥಾಪಿಸಿ, ಇಲ್ಲಿದಿದ್ದಲ್ಲಿ ಇಂಟಕ್ ಉಗ್ರ ಅಭಿಯಾನವನ್ನು ರಾಜ್ಯಾದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಇಂಟೆಕ್ನ ರಾಜ್ಯ ಕಾರ್ಯಾಧ್ಯಕ್ಷರಾದ ರಾಕೇಶ್ ಮಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷರಾದ ಮನೋಹರ್ ಶೆಟ್ಟಿ, ರಾಜ್ಯ ಉಪಾಧ್ಯಕ್ಷರಾದ ರಹೀಂ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮುಖಂಡರಾದ ಕಳ್ಳಿಗೆ ತಾರಾನಾಥ್ ಶೆಟ್ಟಿ, ಅಬೂಬಕರ್ ಎನ್.ಎಂ.ಪಿ.ಟಿ, ಪಿ.ಕೆ ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತಿರದ್ದರು.