ಸಾರಾಯಿ ನಿಷೇಧಿಸುವಂತೆ ಆಗ್ರಹ : ಮಹಿಳೆಯರು,ಪ್ರಗತಿಪರ ಸಂಘಟನೆಗಳಿಂದ ಧರಣಿ

ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಎಂಎಸ್‍ಎಐಎಲ್ ರದ್ದುಪಡಿಸಲು ಗ್ರಾಮದ ಹಲವು ಮುಖಂಡರು, ಮಹಿಳೆಯರಿಂದ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಮೊಹರೆ ಹನಮಂತರಾಯ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ನಂತರ ಅಂಬೇಡ್ಕರ್ ವೃತ್ತದಲ್ಲಿ ಹಲವಾರು ಪ್ರಗತಿಪರ ಸಂಘಟನೆಯ ಮುಖಂಡರುಗಳು ಮಾತನಾಡಿ ಮಹಿಳೆಯರ ಹೋರಾಟಕ್ಕೆ ಬೆಂಬಲ ಸೂಚಿಸಿದರು.ನಂತರ ಅಬಕಾರಿ ಇಲಾಖೆಯ ಅಧಿಕಾರಿಗಳು ತಾತ್ಕಾಲಿಕವಾಗಿ ಎಂಎಸ್‍ಎಐಎಲ್ ಬಂದು ಮಾಡಿ ಜಿಲ್ಲಾಧಿಕಾರಿಗಳು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಭರವಸೆ ನೀಡುವ ಮೂಲಕ ಗ್ರಾಮದ ಮಹಿಳೆಯರಿಂದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಡಿಎಸ್‍ಎಸ್ ಸಂಚಾಲಕರಾದ ವೈ ಸಿ ಮಯೂರ, ಮುಖಂಡರಾದ ಪ್ರಕಾಶ ಗುಡಿಮನಿ, ಸಂಗನಗೌಡ ಪಾಟೀಲ ಹಾಗೂ ಇತರರು ಮಾತನಾಡಿ ಮಹಿಳೆಯರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು.ಇದೇ ಸಂದರ್ಭದಲ್ಲಿ ಮುಳಸಾವಳಗಿ ಗ್ರಾಮದ ಮುಖಂಡರು, ನೂರಾರು ಮಹಿಳೆಯರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.