ಸುಬ್ರಹ್ಮಣ್ಯದಲ್ಲಿ ಸರಕಾರಿ ಬಸ್-ಕಾರು ಮಧ್ಯೆ ಅಪಘಾತ

ಕಡಬ: ಸರಕಾರಿ ಬಸ್ ಹಾಗೂ ಕಾರೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ.


ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ ಗಾಯಗಳಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಬೇಟಿ ನೀಡಿದ್ದು, ಬಸ್ ಚಾಲಕ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published.