ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಆಯ್ಕೆ
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿಯಾಗಿ ಶೈಲಾ ಎಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಭಾರತಿ ಜಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕೇಸರಿ ಎಸ್ ಪೂಂಜ, ಕ್ರೀಡಾ ಕಾರ್ಯದರ್ಶಿಯಾಗಿ ಅಕ್ಷತಾ ಜಿ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಮಹಿಳಾ ವೇದಿಕೆಯ ಅಧ್ಯೆಕ್ಷೆ ಬೇಬಿ ನಾಗಣ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮಹಿಳಾ ವೇದಿಕೆಯ ಮಾಜೀ ಅಧ್ಯಕ್ಷರಾದ ಅಂಜನಾ ಎಂ ಶೆಟ್ಟಿ, ಮಮತಾ ಶೆಟ್ಟಿ, ಚಂದ್ರ ಕಲಾ ಶೆಟ್ಟಿ, ಉಪಾಧ್ಯೆಕ್ಷೆ ಸುಜಾತ ಶೆಟ್ಟಿ ಹೊಸಬೆಟ್ಟು ಹಾಗೂ ಮಹಿಳಾ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.