ಸೆ.25ರಂದು ಮಂಗಳೂರಿನಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನೆ
ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು.
ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ ದರ್ಜೆ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಆಯುಷ್ ಸಂಯುಕ್ತ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಉದ್ಘಾಟಿಸಲಿದ್ದು, ಪಾರ್ಮಸಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಸಚಿವರಾದ ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಮತ್ ಹಾಗೂ ಅಯುಷ್ ಇಲಾಖೆಯ ಆಯುಕ್ತರಾದ ರಾಮಚಂದ್ರ ಅವರು ಉಪಸ್ಥಿತರಿರುವರು ಎಂದು ಅವರು ಹೇಳಿದರು.