ಸೋಲಿನಿಂದ ಮೋದಿ ಸರ್ಕಾರ ಎಚ್ಚೆತ್ತುಕೊಂಡಿದೆ : ಮಾಜಿ ಸಚಿವ ರಮಾನಾಥ ರೈ
ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು.
ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು. ರೈತರ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಸೋಲಿನಿಂದ ಮೋದಿ ಸರ್ಕಾರ ಎಚ್ಚೆತ್ತುಕೊಂಡಿದೆ. ಇಂಧನ ಬೆಲೆ ಇಳಿಕೆಗೆ ಉಪ ಚುನಾವಣೆ ಸೋಲು ಕಾರಣವಾಗಿದೆ. ರೈತ ವಿರೋಧಿ ಕಾನೂನನ್ನು ಹಿಂಪಡೆಯಲು ಸೋಲೇ ಕಾರಣ. ಮೋದಿ ಸರ್ಕಾರದ ದುರಾಡಳಿತ ದೇಶದ ಜನತೆಗೆ ಅರ್ಥವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಯು.ಟಿ. ಖಾದರ್, ವಿಶ್ವಾಸ್ ಕುಮಾರ್ ದಾಸ್, ಕೋಡಿಜಾಲ್ ಇಬ್ರಾಹಿಂ, ಶಶಿಧರ್ ಹೆಗ್ಡೆ, ಲುಕ್ಮಾನ್ ಬಂಟ್ವಾಳ ಮೊದಲಾದವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.