ಸ್ಟ್ರೆಚರ್‌ನಲ್ಲಿ ಆರೋಪಿಯನ್ನು ಕೋರ್ಟ್‌ಗೆ ಹಾಜರು: ಪೊಲೀಸರ ಮೇಲೆ ನ್ಯಾಯಾಧೀಶರು ಗರಂ

ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು.
ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ಈ ಪ್ರಕರಣದಲ್ಲಿ ಅತನಿಗೆ ಕೋರ್ಟ್‌ಗೆ ಹಾಜರಾಗುವಂತೆ ವಾರಂಟ್ ಹೊರಡಿಸಲಾಗಿತ್ತು. ಆರೋಪಿ ಅಸೌಖ್ಯದಿಂದ ಹಾಸಿಗೆ ಹಿಡಿದಿದ್ದ. ಕುಟುಂಬ ವರ್ಗದಿಂದ ದೂರವಾಗಿ ಅನಾಥವಾಗಿದ್ದ. ಇದು ಸಾಮಾಜಿಕ ಕಾರ್ಯಕರ್ತ ಆಸೀಫ್ ಎಂಬುವರ ಗಮನಕ್ಕೆ ಬಂದಿದ್ದು, ಕೂಡಲೇ ಮಹಮ್ಮದ್‌ನನ್ನು ಮೂಲ್ಕಿ ಕಾರ್ನಾಡುವಿನ ಅನಾಥಾಶ್ರಮಕ್ಕೆ ಕರೆದೊಯ್ದಿದ್ದು, ಅಲ್ಲಿ ೩ ತಿಂಗಳಿನಿಂದ ಚಿಕಿತ್ಸೆ ನೀಡಲಾಗುತ್ತಿದೆ. ಮಹಮ್ಮದ್‌ನನ್ನು ಆ.12ರಂದು ಕೋರ್ಟ್‌ಗೆ ಹಾಜರುಪಡಿಸುವಂತೆ ಆಸೀಪ್‌ಗೆ ಪೊಲೀಸರು ಒತ್ತಡ ಹೇರಿದ್ದರು. ಮಹಮ್ಮದ್‌ನನ್ನು ಆಂಬುಲೆನ್ಸ್‌ನಲ್ಲಿ ಕೋರ್ಟ್‌ಗೆ ಕರೆದುಕೊಂಡು ಬಂದಿದ್ದು, ಸ್ಟ್ರೆಚರ್‌ನಲ್ಲೇ ಮಲಗಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಆರೋಪಿ ಪರಿಸ್ಥಿತಿ ಪರಿಗಣಿಸಿದ ನ್ಯಾಯಾಧೀಶರು ಆತನನ್ನು ಈ ಸ್ಥಿತಿಯಲ್ಲಿ ಕೋರ್ಟ್ ಮುಂದೆ ಹಾಜರುಪಡಿಸುವ ಅಗತ್ಯವೇನಿತ್ತು…?ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related Posts

Leave a Reply

Your email address will not be published.