ಸ್ವಸ್ತಿಕಾ ನ್ಯಾಷನಲ್ ಸ್ಕೂಲ್ ನಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರ

ಮಂಗಳೂರಿನಲ್ಲಿರುವ ಸ್ವಸ್ತಿಕಾ ನ್ಯಾಷನಲ್ ಸ್ಕೂಲ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಕೋವಿಡ್ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಉರ್ವಸ್ಟೋರಿನ 25 ಮತ್ತು 26ನೇ ವಾರ್ಡಿನ ಕಾರ್ಪೊರೇಟರುಗಳಾದ ಗಣೇಶ ಕುಲಾಲ್ ಹಾಗೂ ಶ್ರೀಮತಿ ಜಯಲಕ್ಷ್ಮೀ ಶೆಟ್ಟಿ ಅವರು ನೆರವೇರಿಸಿದರು.

ಆರೋಗ್ಯ ಅಧಿಕಾರಿ ಡಾ.ಇಲಂಗೊ, ಸ್ವಸ್ತಿಕಾ ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕರಾದ ಡಾ.ರಾಘವೇಂದ್ರ ಹೊಳ್ಳ, ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಮಾಲಿನಿ ಹೆಬ್ಬಾರ್ ಎನ್ ಉಪಸ್ಥಿತರಿದ್ದರು.
ಈ ಶಿಬಿರದ ಪ್ರಯೋಜನವನ್ನು ಸಂಸ್ಥೆಯ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪೋಷಕರು ಮತ್ತು ಸಾರ್ವಜನಿಕರು ಪಡೆದುಕೊಂಡರು.

Related Posts

Leave a Reply

Your email address will not be published.