“ಹಡಿಲು ಭೂಮಿ ಕೃಷಿ ಅಂದೋಲನ”ರಾಷ್ಟ್ರಕ್ಕೆ ಮಾದರಿ: ಸಚಿವ ಬಿ.ಸಿ. ಪಾಟೀಲ್
ಫಲವತ್ತಾದ ಕೃಷಿ ಭೂಮಿಗಳನ್ನು ಹಡಿಲು ಬಿಡುವುದು ರಾಷ್ಟ್ರಕ್ಕೆ ಮಾಡುವ ದ್ರೋಹ. ಭೂಮಿ ತಾಯಿಯನ್ನು ಹಸನಾಗಿಸಿದರೆ ಆ ತಾಯಿ ನಮಗೆ ಚಿನ್ನದಂತಹ ಬೆಳೆಯನ್ನು ನೀಡುತ್ತಾಳೆ. ಹಡಿಲು ಭೂಮಿಯನ್ನು ಕೃಷಿ ಮಾಡುವಂತಹ ಈ ಪುಣ್ಯದ ಕಾರ್ಯವನ್ನು ಉಡುಪಿಯಲ್ಲಿ ಹಮ್ಮಿಕೊಂಡು ರಾಷ್ಟ್ರಕ್ಕೆ ಮಾದರಿಯಾಗಿದ್ದೀರಿ ಎಂದು ಕೃಷಿ ಸಚಿವರಾದ ಶ್ರೀ ಬಿ. ಸಿ. ಪಾಟೀಲ್ ಹೇಳಿದರು.
ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 110 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಕಡೆಕಾರ್ ಗ್ರಾಮದ ಭುವನೇಂದ್ರ ಕಿದಿಯೂರು ಅವರ ಮನೆ ಹಿಂಬದಿಯ 40 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಿ.ಸಿ ಪಾಟೀಲ್ ಮಾನ್ಯ ಕೃಷಿ ಸಚಿವರು ಇವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ನೇಜಿ ನೆಡುವುದರ ಮೂಲಕ ನೀಡುವುದರ ಮೂಲಕ ಯಂತ್ರ ನಾಟಿಗೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ದಾಮಾ ರವೀಂದ್ರ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಸ್ಥಳೀಯರಾದ ಭುವನೇಂದ್ರ ಕಿದಿಯೂರು, ರಿಕೇಶ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಕೃಷಿಕರು, ಭೂ ಮಾಲಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.