ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು
ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.