ಅಮೆಝಾನ್ ಲೀಗಲ್ ಫೀ ಪ್ರಕರಣ: ಪ್ರಧಾನಿ ಮೋದಿ ಸ್ಪಷ್ಟನೆ ನೀಡಲಿ: ಡಾ. ಅಮೀ ಯಜ್ಞಿಕ್

 ಇ ಕಾಮರ್ಸ್ ಸಂಸ್ಥೆಯಾದ ಅಮೆಝಾನ್‌ನ ಕಾನೂನು ಸಲಹೆಗಾರರು ಭಾರತದ ಸರಕಾರದ ಅಧಿಕಾರಿಗಳಿಗೆ ನೀಡಿದ್ದಾರೆನ್ನುವ ೮,೫೪೬ ಕೋಟಿ ರೂ.ಗಳು ಲಂಚ ಪ್ರಕರಣವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟ ಪಡಿಸಬೇಕು ಎಂದು ಎಐಸಿಸಿ ವಕ್ತಾರೆ, ರಾಜ್ಯಸಭಾ ಸದಸ್ಯೆ ಡಾ. ಅಮೀ ಯಜ್ಞಿಕ್ ಆಗ್ರಹಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇದೊಂದು ಬಹುದೊಡ್ಡ ಹಗರಣವಾಗಿದೆ. ಈ ಹಣ ಎಲ್ಲಿಗೆ ಹೋಗುತ್ತಿದೆ. ಯಾರಿಗೆ ಹೋಗುತ್ತಿದೆ ಎಂಬುದನ್ನು ಜನತೆಗೆ ತಿಳಿಯುವ ಹಕ್ಕಿದೆ. ಸರಕಾರದ ಅಧಿಕಾರಿಗಳಿಗೆ ಈ ಹಣ ನೀಡಲಾಗಿದೆ ಎನ್ನಲಾಗಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಂದ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ತಾನು ಈಗಾಗಲೇ ಪ್ರಧಾನಿ ಸೇರಿದಂತೆ ಸರಕಾರಕ್ಕೆ ಪತ್ರವನ್ನೂ ಬರೆದಿರುವುದಾಗಿ ಹೇಳಿದರು.

ಇನ್ನು ವಿದೇಶಿ ಇ ಕಾಮರ್ಸ್ ಸಂಸ್ಥೆಯೊಂದು ಸರಕಾರದ ಅಧಿಕಾರಿಗಳಿಗೆ ಲೀಗಲ್ ಫೀಯಾಗಿ ಇಷ್ಟೊಂದು ಹಣವನ್ನು ನೀಡಿದೆ ಎನ್ನುವಾಗ ಸರಕಾರದ ನೇತೃತ್ವ ವಹಿಸಿರುವ ಪ್ರಧಾನಿ ಮನ್ ಕಿ ಬಾತ್‌ನ ಮೂಲಕವಾದರೂ ಮೌನ ಮುರಿಯಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಪಿ.ವಿ. ಮೋಹನ್, ಸದಾಶಿವ ಉಳ್ಳಾಲ್, ಜೋಕಿಂ ಡಿಸೋಜ, ಆರಿಫ್ ಬಾವಾ, ನೀರಜ್ ಪಾಲ್, ಗಣೇಶ್ ಪೂಜಾರಿ, ಶುಭೋದಯ ಆಳ್ವ, ಲಾರೆನ್ಸ್ ಡಿಸೋಜ, ಟಿ.ಕೆ. ಸುಧೀರ್, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.

 

 

Related Posts

Leave a Reply

Your email address will not be published.