HomeFresh Newsಆಪಲ್ ಮೊಬೈಲ್ ಶೋರೂಂನಿಂದ ಕಳವು ಪ್ರಕರಣ: ಓರ್ವ ಆರೋಪಿ ಸೆರೆ, 40ಮೊಬೈಲ್ ವಶಕ್ಕೆ

ಆಪಲ್ ಮೊಬೈಲ್ ಶೋರೂಂನಿಂದ ಕಳವು ಪ್ರಕರಣ: ಓರ್ವ ಆರೋಪಿ ಸೆರೆ, 40ಮೊಬೈಲ್ ವಶಕ್ಕೆ

 ಮಂಗಳೂರಿನ ಆಪಲ್ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ ಕಳವಾದ 40 ಮೊಬೈಲ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದು, ಸುಮಾರು 41 ಲಕ್ಷ ರೂ. ವೌಲ್ಯದ ಕಳವಾದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕಮಾರ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಕೆಲ ಸಮಯದ ಹಿಂದೆ ನಗರದ ಆಪಲ್ ಶೋಂ ರೂಂನಿಂದ 60 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ೬೮ ಮೊಬೈಲ್‌ಗಳು ಕಳವಾಗಿರುವುದಾಗಿ ದೂರು ನೀಡಲಾಗಿತ್ತು. ಈ ಕೃತ್ಯವನ್ನು ಇಬ್ಬರು ಆರೋಪಿಗಳು ಎಸಗಿರುವುದು ಪತ್ತೆಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯ ವಿರುದ್ಧ ಮುಂಬೈನಲ್ಲಿ ಕಳ್ಳತನ ಸೇರಿ ೯ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎಂದು ಅವರು ಹೇಳಿದರು. ಇನ್ನು ಸಿಸಿಬಿ ತಂಡ ಆರೋಪಿಗಳ ಪತ್ತೆಯಲ್ಲಿ ತಂಡದ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ತಂಡಕ್ಕೆ ಪ್ರೋತ್ಸಾಹ ಧನವಾಗಿ 10,೦೦೦ ರೂ. ನಗದು ಬಹುಮಾನವನ್ನು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಈ ಸಂದರ್ಭ ಘೋಷಿಸಿದರು.ಈ ಸಂದರ್ಭ ಡಿಸಿಪಿಗಳಾದ ಹರಿರಾಂ ಶಂಕರ್ ಹಾಗೂ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments