HomeFresh Newsಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಯುವತಿ ಮೃತ್ಯು

ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಯುವತಿ ಮೃತ್ಯು

ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ ೨೩ರಂದು ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ ರಾತ್ರಿ ಅತೀಯಾಗಿ ವಾಂತಿಯಾದುದರಿಂದ ಅಸ್ವಸ್ಥತೆಗೊಂಡ ಅಶ್ವಿನಿಯವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಕಡಿಮೆ ರಕ್ತದೊತ್ತಡ ಎಂಬುದಾಗಿ ತಿಳಿಸಿ ಕೂಡಲೇ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದರು. ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿ ಚಿಕಿತ್ಸೆ ನೀಡಿದರು ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವನ್ನು ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments