ನನಗೆ ರಾಜಕೀಯದಲ್ಲಿ ಪುನರ್ಜನ್ಮ ನೀಡಿದ ಮಹಾನ್ ನಾಯಕ ಅಗಲಿದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ. ಉಡುಪಿ, ದ.ಕ ಜಿಲ್ಲೆಗೆ ಆಸ್ಕರ್ ಫೆರ್ನಾಂಡಿಸ್ ಅವರ ಕೊಡುಗೆ ಅಪಾರ. ನಾನು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರು. ಜಿಲ್ಲೆಯಲ್ಲಿ ಸಾಕಷ್ಟು ನಾಯಕರನ್ನು ಹುಟ್ಟುಹಾಕುವ ಕೆಲಸ ಮಾಡಿದ್ದಾರೆ. ಅಜಾತಶತ್ರು ಆಸ್ಕರಣ್ಣನ ಅಗಲುವಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು.
ಆಸ್ಕರ್ ಫೆರ್ನಾಂಡಿಸ್‌ಗೆ ಸಂತಾಪ ಸೂಚಿಸಿದ ಗೋಪಾಲ ಪೂಜಾರಿ
RELATED ARTICLES
