HomeFresh Newsಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಸಿಎಂ ಬಸವರಾಜ್...

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಸಿಎಂ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವಂತ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12 ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಾಲಾ ಕಾಲೇಜು ತೆರೆಯೋ ಸಂಬಂಧ ತಜ್ಞರೊಂದಿಗೆ ಚರ್ಚಿಸಲಾಗಿದೆ. ಮೊದಲ ಹಂತದಲ್ಲಿ 9, 10, 11 ಮತ್ತು 12 ನೇ ತರಗತಿಯನ್ನು ಆಗಸ್ಟ್ 23ರಿಂದ ತೆರೆಯೋದಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಶಾಲಾ-ಕಾಲೇಜುಗಳನ್ನು ವಾರದಲ್ಲಿ ಎರಡು ಬ್ಯಾಚ್ ನಂತೆ ತರಗತಿ ಆರಂಭಕ್ಕೆ ತಿಳಿಸಲಾಗಿದೆ. ಕೊರೋನಾ ನಿಯಂತ್ರಣ ಕ್ರಮದೊಂದಿಗೆ ಆರಂಭಿಸೋದಕ್ಕೆ ಅನುಮತಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರಾಥಮಿಕ ಹಾಗೂ ಇತರೆ ತರಗತಿ ಆರಂಭ ಕುರಿತಂತೆ ಕೋವಿಡ್ ೩ನೇ ಅಲೆ ನೋಡಿಕೊಂಡು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments